ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಉಪಕರಣಗಳ ಬೆಲೆ ಏರಿಕೆಯಿಂದ ಕಂಗಾಲಾದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರಸಗೊಬ್ಬರ ದರ ಕೂಡಾ ಹೆಚ್ಚಳವಾಗಿದೆ.
ರಸಾಯನಿಕ ಗೊಬ್ಬರ ದರ ಶೇಕಡ 10 ರಿಂದ 30 ರಷ್ಟು ಹೆಚ್ಚಳವಾಗಿದ್ದು, ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ರೈತ ಸಮುದಾಯದಿಂದ ಒತ್ತಾಯ ಕೇಳಿಬಂದಿದೆ.
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ, ಕಚ್ಚಾವಸ್ತುಗಳ ಬೆಲೆ ಹೆಚ್ಚಳವಾಗಿರುವುದರಿಂದ ಉತ್ಪಾದನೆ ವೆಚ್ಚ ಸರಿದೂಗಿಸಲು ರಸಗೊಬ್ಬರ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಯೂರಿಯಾ ಹೊರತುಪಡಿಸಿ ಡಿಎಪಿ, ಪೊಟ್ಯಾಷ್ ಸೇರಿದಂತೆ ವಿವಿಧ ಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಮುಂಗಾರು ಪೂರ್ವ ಮಳೆಯಾದ ನಂತರ ಕೃಷಿ ಚಟುವಟಿಕೆಯಲ್ಲಿ ತೊಡಗಲು ರೈತರು ರೆಡಿಯಾಗಬೇಕಿದ್ದು, ಇಂತಹ ಸಂದರ್ಭದಲ್ಲಿ ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಶಾಕ್ ನೀಡಿದೆ. ಡಿಎಪಿ ದರ 1370 ರೂ.ನಿಂದ 1500 ರೂ.ಗೆ ಹೆಚ್ಚಳವಾಗಿದೆ. ಅದೇ ರೀತಿ ವಿವಿಧ ಗೊಬ್ಬರ ದರ ಕೂಡ ಏರಿಕೆಯಾಗಿದೆ.