ರೈತರ ಮಕ್ಕಳಿಗೆ ಸ್ಕಾಲರ್ ಶಿಪ್, ಕಿಸಾನ್ ಸಮ್ಮಾನ್ ರೀತಿ ನೇಕಾರರಿಗೂ ಸೌಲಭ್ಯ ವಿಸ್ತರಿಸಲು ಸರ್ಕಾರ ಮುಂದಾಗಿದೆ. ನೇಕಾರ ಸಮ್ಮಾನ್ ಯೋಜನೆ ಜಾರಿ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಸುಮಾರು 12 ಲಕ್ಷಕ್ಕೂ ಅಧಿಕ ನೇಕಾರರು ಇದ್ದು, ಅವರನ್ನು ರೈತರೆಂದು ಪರಿಗಣಿಸಿ, ನೇಕಾರರ ಮಕ್ಕಳಿಗೆ ಸ್ಕಾಲರ್ ಶಿಪ್ ನೇಕಾರ ಸಮ್ಮಾನ್ ಯೋಜನೆಯಡಿ ನೆರವು ನೀಡಲಾಗುತ್ತದೆ. ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಪರಿಹಾರ ನೀಡಲು ಚಿಂತನೆ ನಡೆದಿದ್ದು, ಸರ್ಕಾರ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಲಾಗಿದೆ.
ರೈತರ ಮಾದರಿಯಲ್ಲಿ ನೇಕಾರರಿಗೂ ಸೌಲಭ್ಯ ಕಲ್ಪಿಸಬೇಕೆಂಬ ಬೇಡಿಕೆಯನ್ನು ಪರಿಗಣಿಸಲಾಗಿದ್ದು, ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುವ ರೀತಿಯಲ್ಲಿ ನೇಕಾರರ ಮಕ್ಕಳಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.