ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಫಾಸ್ಟಾಗ್ ಮೂಲಕ ಟೋಲ್ ಪಾವತಿಸುವ ವಾಹನ ಮಾಲೀಕರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇರುವ ಆಹಾರ ಪ್ಲಾಜಾಗಳಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡುವ ಕುರಿತು ಚಿಂತನೆ ನಡೆಸಿದೆ.
ಟೋಲ್ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಕುರಿತಾಗಿ ಚಿಂತನೆ ನಡೆಸಿದೆ. ಪ್ರಸ್ತುತ ಶೇಕಡ 73ರಷ್ಟು ವಾಹನಗಳು ಫಾಸ್ಟ್ಯಾಗ್ ಬಳಸುತ್ತಿವೆ ಎನ್ನಲಾಗಿದ್ದು ಇನ್ನು ಎರಡು-ಮೂರು ವರ್ಷಗಳಲ್ಲಿ ಶೇಕಡ 100ರಷ್ಟು ವಾಹನಗಳು ಫಾಸ್ಟಾಗ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿಗಳ ಆಹಾರ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಬಳಕೆದಾರರಿಗೆ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.