ರಸಗೊಬ್ಬರ ಬೆಲೆ ಏರಿಕೆಯ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಮುಂಗಾರು ಆರಂಭಕ್ಕೆ ಮೊದಲೇ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ವಹಿಸಿದ್ದು, ಹಳೆಯ ದರದಲ್ಲಿ ರಸಗೊಬ್ಬರ ಮಾರಾಟಕ್ಕೆ ಕ್ರಮಕೈಗೊಳ್ಳಲಾಗಿದೆ. ರೈತರು ಆತಂಕಪಡಬೇಕಿಲ್ಲ. ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಕಳೆದ ಸಾಲಿನ 11.15 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಗೋದಾಮುಗಳಲ್ಲಿ ದಾಸ್ತಾನು ಮಾಡಲಾಗಿದೆ. ಈ ಬಾರಿ ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆಯಾಗುವುದಿಲ್ಲ. ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್, ಎಂಒಪಿ ರಸಗೊಬ್ಬರ ದಾಸ್ತಾನು ಿದೆ.
ದರ ಏರಿಕೆಗೆ ಮೊದಲು ಇದ್ದ ದರದಲ್ಲಿ ರೈತರಿಗೆ ಗೊಬ್ಬರ ವಿತರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಕ್ರಮಕೈಗೊಂಡಿದೆ. ರಾಜ್ಯದ ಖಾಸಗಿ ಮಾರಾಟಗಾರರು, ಕೃಷಿ ಸಹಕಾರ ಸಂಘ ಸೇರಿ 11,000 ರಸಗೊಬ್ಬರ ಮಳಿಗೆಗಳ ಮೂಲಕ ರೈತರಿಗೆ ರಸಗೊಬ್ಬರ ನೀಡಲಾಗುವುದು.
ಆಧಾರ್ ಕಾರ್ಡ್, ಪಹಣಿ ನೋಂದಣಿ ಮಾಡಿ ರಸಗೊಬ್ಬರ ಪಡೆಯಬಹುದಾಗಿದೆ. ಮುಂಗಾರಿನ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಹಂಚಿಕೆ ಮಾಡಲಾಗಿದೆ. ಮುಂಗಾರು ಆರಂಭವಾಗುತ್ತಿದ್ದಂತೆಯೇ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಅಗತ್ಯವಾದ ರಸಗೊಬ್ಬರ ದಾಸ್ತಾನು ಸಂಗ್ರಹಕ್ಕೆ ಸರ್ಕಾರ ಕ್ರಮಕೈಗೊಂಡಿದೆ. ಕೇಂದ್ರದಿಂದ ಹಂಚಿಕೆಯಾದ ರಸಗೊಬ್ಬರಕ್ಕೆ ಇಂಡೆಂಟ್ ನೀಡಲಾಗಿದೆ. ಈಗಾಗಲೇ ಕೆಲವೆಡೆ ಗೊಬ್ಬರ ವಿತರಣೆಗೆ ಚಾಲನೆ ನೀಡಲಾಗಿದೆ ಎನ್ನಲಾಗಿದೆ.