alex Certify ಮೋದಿ ಸರ್ಕಾರದಿಂದ ಸಿಹಿ ಸುದ್ದಿ: ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ, DEA ಕಾರ್ಯದರ್ಶಿ ತರುಣ್ ಬಜಾಜ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದಿಂದ ಸಿಹಿ ಸುದ್ದಿ: ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ, DEA ಕಾರ್ಯದರ್ಶಿ ತರುಣ್ ಬಜಾಜ್ ಮಾಹಿತಿ

ನವದೆಹಲಿ: ದೀಪಾವಳಿ ಹಬ್ಬದ ಹೊತ್ತಲ್ಲೇ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರವೇ ಇನ್ನೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ತರುಣ್ ಬಜಾಜ್ ಈ ಬಗ್ಗೆ ಮಾತನಾಡಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶೀಘ್ರದಲ್ಲೇ ಇನ್ನೊಂದು ಸುತ್ತಿನ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವರು ಎಂದು ತಿಳಿಸಿದ್ದಾರೆ.

ಹಣಕಾಸು ಸಚಿವಾಲಯ ವತಿಯಿಂದ ವಿವಿಧ ವಲಯಗಳಿಂದ ಬಂದ ಮನವಿ ಮತ್ತು ಸಲಹೆಗಳನ್ನು ಪರಿಶೀಲನೆ ನಡೆಸಿದ್ದು, ಶೀಘ್ರವೇ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಕಾರ್ಯೋನ್ಮುಖವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಪ್ಯಾಕೇಜ್ ಯಾವಾಗ ಘೋಷಿಸಲಾಗುವುದು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ, ಶೀಘ್ರವೇ ಕೇಂದ್ರ ಹಣಕಾಸು ಸಚಿವರು ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ. ಆರ್ಥಿಕ ವ್ಯವಸ್ಥೆಯಲ್ಲಿ ಬೇಡಿಕೆಗೆ ಉತ್ತೇಜನ ನೀಡಲು ಮತ್ತು ಬಂಡವಾಳ ವೆಚ್ಚ ಹೆಚ್ಚಿಸಲು ಮತ್ತಷ್ಟು ಕ್ರಮಕೈಗೊಳ್ಳಲಾಗುತ್ತದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತರುಣ್ ಬಜಾಜ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...