alex Certify ಬಿಗ್‌ ನ್ಯೂಸ್: ಕೊರೊನಾ ಲಸಿಕೆಗೆ 35 ಸಾವಿರ ಕೋಟಿ ರೂ. ಮೀಸಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಕೊರೊನಾ ಲಸಿಕೆಗೆ 35 ಸಾವಿರ ಕೋಟಿ ರೂ. ಮೀಸಲು

ಕೇಂದ್ರ ವಿತ್ತ ಸಚಿವೆ 2021-22ನೇ ಸಾಲಿನ ಕೇಂದ್ರ ಬಜೆಟ್​ನ್ನು ಮಂಡಿಸುತ್ತಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಕೊರೊನಾ ಹಾಗೂ ಆರ್ಥಿಕ ಸಂಕಷ್ಟಗಳನ್ನ ಗಮನದಲ್ಲಿಟ್ಟುಕೊಂಡು 5 ಸ್ತಂಭಗಳ ಆಧಾರದಲ್ಲಿ ಬಜೆಟ್​ ಮಂಡನೆ ಮಾಡಲಾಗ್ತಿದೆ.

ಮೋದಿ 2.0 ಸರ್ಕಾರದ ಮೂರನೇ ಬಜೆಟ್​ ಇದಾಗಿದೆ. ಈ ಬಾರಿಯ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯನ್ನ ನೀಡಲಾಗಿದೆ. 115 ತುರ್ತು ಶಸ್ತ್ರ ಚಿಕಿತ್ಸಾ ಕೇಂದ್ರ ನಿರ್ಮಾಣ ಘೋಷಣೆ, ಹೊಸ ಗ್ರಾಮೀಣ ಆರೋಗ್ಯ ಕೇಂದ್ರಗಳ ನಿರ್ಮಾಣ, 602 ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, 4 ವೈರಾಲಿಜಿ ಇನ್​ಸ್ಟಿಟ್ಯೂಟ್​ಗಳ ಸ್ಥಾಪನೆ, 5 ಹೊಸ ರೋಗ ನಿಯಂತ್ರಣ ಕೇಂದ್ರಗಳ ನಿರ್ಮಾಣ ಸೇರಿದಂತೆ ಆರೋಗ್ಯ ಸೇವೆಗಳ ಮೇಲಿನ ಹೂಡಿಕೆ ಹೆಚ್ಚಿಸುವ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಕೊರೊನಾ ಲಸಿಕೆಗೆ ಬಜೆಟ್​ನಲ್ಲಿ 35 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅಲ್ಲದೇ ಅವಶ್ಯಕತೆ ಬಿದ್ದರೆ ಇನ್ನೂ ಹೆಚ್ಚಿನ ಹಣವನ್ನ ಕೇಂದ್ರ ಸರ್ಕಾರ ನೀಡಲಿದೆ. ದೇಶದಲ್ಲಿ 2 ಸ್ವದೇಶಿ ನಿರ್ಮಿತ ಕೊರೊನಾ ಲಸಿಕೆ ಬಳಕೆಯಾಗ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...