ಬೆಂಗಳೂರು: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.
ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಗೆ ಮಿತಿ, ಮೀಟರ್ ಅಳವಡಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಎಸ್ಕಾಂಗಳಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ಹಿಂದೆ ಸರಿಯುವುದಿಲ್ಲ. ರೈತರಿಗೆ ಸೌಲಭ್ಯ ಕಲ್ಪಿಸುವ ವಿಚಾರದಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.