ನವದೆಹಲಿ: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಉಚಿತ ಪಡಿತರ ಯೋಜನೆ ವಿಸ್ತರಿಸುವಂತೆ ಐಎಂಎಫ್ ಉಪ ಪ್ರಧಾನ ನಿರ್ದೇಶಕಿ ಗೀತಾ ಗೋಪಿನಾಥ್ ಸಲಹೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ ಅಡಿಯಲ್ಲಿ 2022ರ ಮಾರ್ಚ್ ವರೆಗೆ ಉಚಿತ ಪಡಿತರ ವಿತರಣೆ ಮಾಡಲಿದೆ. ಅದನ್ನು ಮಾರ್ಚ್ ನಂತರವೂ ವಿಸ್ತರಿಸಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಬ್ಲೂಮ್ ಬರ್ಗ್ ಕ್ವಿಂಟ್ ಗೆ ನೀಡಿದ ಸಂದರ್ಶನದಲ್ಲಿ ಐಎಂಎಫ್ ಮೊದಲ ಉಪಪ್ರಧಾನ ನಿರ್ದೇಶಕಿ ಗೀತಾ ಗೋಪಿನಾಥ್ ಸಲಹೆ ನೀಡಿದ್ದಾರೆ.
ಆರೋಗ್ಯ ಮತ್ತು ಶಿಕ್ಷಣ ವಲಯಕ್ಕೆ ಸರ್ಕಾರ ಹೆಚ್ಚು ಖರ್ಚು ಮಾಡಬೇಕು. ವಿತ್ತೀಯಕೊರತೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅಮೆರಿಕದಂತಹ ಮುಂದುವರೆದ ದೇಶದಲ್ಲಿ ಬಡ್ಡಿದರ ಏರಿಕೆ ಆಗುತ್ತಿರುವ ಸಂದರ್ಭದಲ್ಲಿ ಭಾರತ ಹಣಕಾಸು ವೆಚ್ಚವನ್ನು ಕಡಿಮೆ ಮಾಡುವುದು ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.