
ನವದೆಹಲಿ: ಏರಿಕೆಯ ಹಾದಿಯಲ್ಲೇ ಇರುವ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಮತ್ತೆ ಹೆಚ್ಚಳವಾಗಿದೆ. ಬುಧವಾರವೂ ಇಂಧನ ಬೆಲೆ ಏರಿಕೆಯಾಗಿದೆ.
ಪೆಟ್ರೋಲ್ ಬೆಲೆ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು ಲೀಟರ್ಗೆ 27 ಪೈಸೆ ಹೆಚ್ಚಿಸಿದ ನಂತರ ಬುಧವಾರ ಇಂಧನ ದರ ಗರಿಷ್ಠ ಮಟ್ಟವನ್ನು ತಲುಪಿದೆ. ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ಗೆ 87.60 ರೂ., ಡೀಸೆಲ್ 77.73 ರೂಪಾಯಿ ಇದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 95 ರೂ.ನಷ್ಟು ಹೆಚ್ಚಾಗಿದೆ. ಡೀಸೆಲ್ ಬೆಲೆ ಲೀಟರ್ ಗೆ 84.63 ರೂಪಾಯಿ ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 70 ಪೈಸೆ ಹೆಚ್ಚಳದ ನಂತರ ಲೀಟರ್ಗೆ 90.53 ರೂ. ಡೀಸೆಲ್ ದರ 82.40 ರೂಪಾಯಿ ಇದೆ.