ನವದೆಹಲಿ: ಸೋಮವಾರದಿಂದ 5 ದಿನಗಳವರೆಗೆ 2021-22 ರ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್‌ನ ಮುಂದಿನ ಕಂತಿನ ವಿತರಣೆ ಮಾಡಲಿದ್ದು, ಬೆಲೆಯನ್ನು ಪ್ರತಿ ಗ್ರಾಂ ಚಿನ್ನಕ್ಕೆ 5,109 ರೂ. ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ತಿಳಿಸಿದೆ.
ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್ 2021-22 – ಫೆಬ್ರವರಿ 28 ರಿಂದ ಮಾರ್ಚ್ 4 ರವರೆಗಿನ ಅವಧಿಗೆ ಚಂದಾದಾರಿಕೆಗಾಗಿ ಸರಣಿ X ತೆರೆದಿರುತ್ತದೆ. ಬಾಂಡ್‌ನ ನಾಮಮಾತ್ರ ಮೌಲ್ಯ 5,109 ರೂ. ಆಗಿದೆ’ ಎಂದು ಸೆಂಟ್ರಲ್ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.
ಭಾರತ ಸರ್ಕಾರವು ಆರ್‌ಬಿಐ ಜೊತೆ ಸಮಾಲೋಚಿಸಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೂಡಿಕೆದಾರರಿಗೆ ಪ್ರತಿ ಗ್ರಾಂಗೆ 50 ರೂಪಾಯಿಗಳ ರಿಯಾಯಿತಿ ನೀಡಲು ನಿರ್ಧರಿಸಿದೆ. ಅಂತಹ ಹೂಡಿಕೆದಾರರಿಗೆ, ಗೋಲ್ಡ್ ಬಾಂಡ್‌ನ ವಿತರಣೆಯ ಬೆಲೆ ಪ್ರತಿ ಗ್ರಾಂ ಚಿನ್ನಕ್ಕೆ ರೂ 5,059 ಆಗಿರುತ್ತದೆ ಎಂದು ಆರ್‌ಬಿಐ ಹೇಳಿದೆ.
ಜನವರಿ 10 – 14 ರ ಅವಧಿಯಲ್ಲಿ ಚಂದಾದಾರಿಕೆಗಾಗಿ ತೆರೆಯಲಾದ ಸರಣಿ IX ನ ವಿತರಣೆಯ ಬೆಲೆ ಪ್ರತಿ ಗ್ರಾಂ ಚಿನ್ನಕ್ಕೆ 4,786 ರೂ. ಇತ್ತು
ಭಾರತ ಸರ್ಕಾರದ ಪರವಾಗಿ ಆರ್‌ಬಿಐ ಬಾಂಡ್‌ಗಳನ್ನು ಬಿಡುಗಡೆ ಮಾಡುತ್ತದೆ. ಬಾಂಡ್‌ಗಳನ್ನು ಬ್ಯಾಂಕ್‌ಗಳು ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (SHCIL), ಗೊತ್ತುಪಡಿಸಿದ ಅಂಚೆ ಕಚೇರಿಗಳು ಮತ್ತು ಮಾನ್ಯತೆ ಪಡೆದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ ಮತ್ತು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಲಿಮಿಟೆಡ್ ಸ್ಟಾಕ್ ಎಕ್ಸ್‌ಚೇಂಜ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ.