alex Certify ಗೋಲ್ಡ್ ಬಾಂಡ್ ಯೋಜನೆ: ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಲ್ಡ್ ಬಾಂಡ್ ಯೋಜನೆ: ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೈಸೂರು: 2020-21ನೇ ಸಾಲಿನ ಸರಣಿಯ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯು ಮಾರ್ಚ್ 1 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 5ರವರೆಗೆ ಇರುತ್ತದೆ. ಗ್ರಾಹಕರು ಈ ಅವಧಿಯೊಳಗೆ ತಮ್ಮ ಸಮೀಪದ ಅಂಚೆ ಕಚೇರಿಯ ಮೂಲಕ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಲ್ಲಿ ಹೂಡಿಕೆ ಮಾಡಿಕೊಳ್ಳಬಹುದು.

ಈ ಬಾಂಡ್ ಕೆಲವು ವೈಶಿಷ್ಟ್ಯಗಳನ್ನು ಹೊಂದಿದೆ. ಕನಿಷ್ಠ ಹೂಡಿಕೆ ಒಂದು ಗ್ರಾಂ ಆಗಿದ್ದು, ವ್ಯಕ್ತಿಗಳಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಗಳಿಗೆ 4 ಕೆಜಿ ಹಾಗೂ ಟ್ರಸ್ಟ್ ಮತ್ತು ಇದೇ ರೀತಿಯ ಘಟಕಗಳಿಗೆ 20 ಕೆಜಿ ಗರಿಷ್ಠ ಹೂಡಿಕೆಯಾಗಿರುತ್ತದೆ.

ಬಾಂಡ್ ಅವಧಿ 8 ವರ್ಷ ಬಾಂಡ್ ಅವಧಿ ಮುಗಿದಾಗ ಮಾರುಕಟ್ಟೆಯಲ್ಲಿರುವ ಚಿನ್ನದ ದರ ಮೊತ್ತವನ್ನು ನೀಡಲಾಗುವುದು. ವಾರ್ಷಿಕ ಶೇ.2.5 ರಷ್ಟು ನಿಶ್ಚಿತ ಬಡ್ಡಿಯೂ ಲಭ್ಯ. 5, 6 ಮತ್ತು 7ನೇ ವರ್ಷಗಳಲ್ಲಿಯೂ ಸಹ ನಿರ್ಗಮಿಸುವ ಅವಕಾಶವಿದೆ. ಸಾಲಗಳಿಗೆ ಮೇಲಾಧಾರವಾಗಿಯೂ ಉಪಯೋಗಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಿ ಅಥವಾ ದೂ.ಸಂ: 0821-2417308, 2417307, 9845107947 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...