ನವದೆಹಲಿ: 10 ತಿಂಗಳ ಕನಿಷ್ಠ ಮಟ್ಟಕ್ಕೆ ಚಿನ್ನದ ದರ ಕುಸಿದಿದೆ. ಬಂಗಾರದ ಬೆಲೆಯಲ್ಲಿ ಬರೋಬ್ಬರಿ 11 ಸಾವಿರ ರೂಪಾಯಿ ಇಳಿಕೆಯಾಗಿದೆ.
ಕಳೆದ ಒಂದು ವಾರದಿಂದಲೂ ಇಳಿಕೆ ಹಾದಿಯಲ್ಲಿರುವ ಚಿನ್ನದ ದರ 10 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಕಳೆದ ವರ್ಷ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಚಿನ್ನದ ದರ ಏರಿಕೆಯಾಗಿದ್ದು, 10 ಗ್ರಾಂ ಶುದ್ಧ ಚಿನ್ನದ ದರ 56,200 ರೂ. ಗೆ ತಲುಪಿತ್ತು. ಈಗ ಚಿನ್ನದ ಬೆಲೆ 11 ಸಾವಿರ ರೂಪಾಯಿಯಷ್ಟು ಕಡಿಮೆಯಾಗಿದೆ. ಬುಧವಾರ 10 ಗ್ರಾಂ ಚಿನ್ನದ ಬೆಲೆ 44,768 ರೂಪಾಯಿಗೆ ಇಳಿದಿದೆ ಎಂದು ಹೇಳಲಾಗಿದೆ.