ಬೆಂಗಳೂರು: ರಷ್ಯಾ ಮೇಲೆ ಕಠಿಣ ಆರ್ಥಿಕ ನಿರ್ಬಂಧ ವಿಧಿಸಿದ ಪರಿಣಾಮ ಚಿನ್ನದ ದರ 1660 ರೂಪಾಯಿಯಷ್ಟು ಇಳಿಕೆಯಾಗಿದೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ಯುರೋಪಿಯನ್ ಒಕ್ಕೂಟದಿಂದ ಕಠಿಣ ಆರ್ಥಿಕ ನಿರ್ಬಂಧ ಹೇರಲಾಗಿದೆ. ಇದರ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯಾಗಿದೆ. ದೇಶಿಯ ಮಾರುಕಟ್ಟೆಗಳಲ್ಲಿ ಚಿನ್ನದ ದರ ಕಡಿಮೆಯಾಗಿದ್ದು, ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 1274 ರೂಪಾಯಿ ಕಡಿಮೆಯಾಗಿ 50,913 ರೂ.ಗೆ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 2219 ರೂ. ಕಡಿಮೆಯಾಗಿ 64,809 ರೂ.ಗೆ ಮಾರಾಟವಾಗಿದೆ.
ಬೆಂಗಳೂರಿನಲ್ಲಿ ಚಿನ್ನದ ದರ 1660 ರೂಪಾಯಿ ಕಡಿಮೆಯಾಗಿ 52,280 ರೂ.ಗೆ ತಲುಪಿದೆ. ಬೆಳ್ಳಿ ದರ ಕೆಜಿಗೆ 1900 ರೂಪಾಯಿ ಕಡಿಮೆಯಾಗಿ 67,100 ರೂಪಾಯಿಗೆ ತಲುಪಿದೆ.