ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ.
10 ಗ್ರಾಂ ಚಿನ್ನದ ದರ 209 ರೂಪಾಯಿ ಹೆಚ್ಚಳವಾಗಿದ್ದು, 47 405 ರೂಪಾಯಿಗೆ ತಲುಪಿದೆ. ಬೆಳ್ಳಿ ದರ ಕೆಜಿಗೆ 617 ರೂಪಾಯಿ ಹೆಚ್ಚಳವಾಗಿದ್ದು, 60,179 ರೂಪಾಯಿಗೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆ ಮತ್ತು ಬೇಡಿಕೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಧಾರಣೆ ಏರಿಕೆ ಕಂಡಿದೆ ಎಂದು ಹೇಳಲಾಗಿದೆ.