ಸೋಮವಾರ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಬಂಗಾರದ ಬೆಲೆ 10 ಗ್ರಾಂಗೆ 800 ರೂಪಾಯಿ ಏರಿಕೆ ಕಂಡಿದೆ. ಎಂಸಿಎಕ್ಸ್ ನಲ್ಲಿ 800 ರೂಪಾಯಿಗಳಷ್ಟು ಏರಿಕೆಯಾಗಿ 10 ಗ್ರಾಂಗೆ 51,833 ರೂಪಾಯಿಯಾಗಿದೆ.
ಎಂಸಿಎಕ್ಸ್ ನಲ್ಲಿ ಬೆಳ್ಳಿ ಬೆಲೆ ಕೂಡ ಏರಿಕೆ ಕಂಡಿದೆ. ಪ್ರತಿ ಕೆಜಿಗೆ ಶೇಕಡಾ 5.5 ಅಥವಾ 3,400 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೆ.ಜಿ.ಗೆ 64,617 ರೂಪಾಯಿಯಾಗಿದೆ. ಕಳೆದ ವಾರ ಚಿನ್ನದ ಬೆಲೆ ಶೇಕಡಾ 4ರಷ್ಟು ಹಾಗೂ ಬೆಳ್ಳಿ ಬೆಲೆ ಶೇಕಡಾ 15ರಷ್ಟು ಏರಿಕೆಯಾಗಿತ್ತು.
ಭಾರತದಲ್ಲಿ ಚಿನ್ನದ ಬೆಲೆ ಅಂತರರಾಷ್ಟ್ರೀಯ ಚಿನ್ನದ ಬೆಲೆಗಳು, ಕರೆನ್ಸಿ ದರ ಮತ್ತು ಸ್ಥಳೀಯ ಸುಂಕಗಳು ಸೇರಿದಂತೆ ಹಲವು ಅಂಶಗಳನ್ನು ಅವಲಂಬಿಸಿರುತ್ತದೆ. ಚಿನ್ನದ ಬೆಲೆಗಳು ಹೆಚ್ಚಾಗಲು ಒಂದು ಪ್ರಮುಖ ಕಾರಣವೆಂದರೆ ಅಂತರರಾಷ್ಟ್ರೀಯ ಬೆಲೆಗಳು.
ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 49,970 ರೂಪಾಯಿಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 50,920 ರೂಪಾಯಿಯಾಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 49,060 ರೂಪಾಯಿಯಾಗಿದೆ. ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 53,490 ರೂಪಾಯಿಯಾದ್ರೆ ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 49,920 ರೂಪಾಯಿಯಾಗಿದೆ.