alex Certify BIG NEWS: ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ

ಲಾಕ್ ಡೌನ್ ನಾಲ್ಕನೇ ಹಂತದ ಮೊದಲ ದಿನ ಚಿನ್ನದ ಬೆಲೆ ಗಗನಕ್ಕೇರಿದೆ. ಶುಕ್ರವಾರ 10 ಗ್ರಾಂ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ 47067 ರೂಪಾಯಿ ದಾಖಲಿಸಿತ್ತು. ಈ ದಾಖಲೆ ಸೋಮವಾರ ಮುರಿದಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ ಹತ್ತು ಗ್ರಾಂಗೆ 881 ರೂಪಾಯಿ ಏರಿಕೆ ಕಂಡಿದೆ. ಇದ್ರಿಂದಾಗಿ  10 ಗ್ರಾಂ ಚಿನ್ನದ ಬೆಲೆ 47948 ರೂಪಾಯಿಯಾಗಿದೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ 2480 ರೂಪಾಯಿ ಏರಿಕೆ ಕಂಡಿದೆ. ಯುಎಸ್-ಚೀನಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ದುರ್ಬಲ ಆರ್ಥಿಕ ಪರಿಸ್ಥಿತಿ ಕಾರಣದಿಂದಾಗಿ ಅಂತರರಾಷ್ಟ್ರೀಯ ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು ಏಳೂವರೆ ವರ್ಷಗಳ ಉನ್ನತ ಮಟ್ಟವನ್ನು ತಲುಪಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇಕಡಾ 1.1ರಷ್ಟು ಏರಿಕೆ ಕಂಡು 1,760.85 ಡಾಲರ್ ಪ್ರತಿ ಔನ್ಸ್ ಆಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 50 ಸಾವಿರ ಗಡಿದಾಟುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...