
ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ.
ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ 46,580 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 188 ರೂಪಾಯಿ ಹೆಚ್ಚಳವಾಗಿದ್ದು, 62,328 ರೂಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ.