ಬೆಂಗಳೂರು: ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಜಾಸ್ತಿಯಾಗಿದ್ದು ಬೆಲೆ ಕೂಡಾ ಭಾರೀ ಹೆಚ್ಚಳವಾಗಿದೆ. ಚಿನ್ನದ ದರ ನಾಲ್ಕು ದಿನದಲ್ಲಿ 1500 ರೂಪಾಯಿ ಜಾಸ್ತಿಯಾಗಿದೆ.
ಒಂದು ಗ್ರಾಂ ಚಿನ್ನದ ಬೆಲೆ 4611 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ ಚಿನ್ನದ ಬೆಲೆ 4471 ರೂಪಾಯಿ ಇದೆ. 4 ದಿನದಲ್ಲಿ 1500 ರೂ. ಜಾಸ್ತಿಯಾಗಿದ್ದು ಭಾನುವಾರ ಮತ್ತೆ ಚಿನ್ನದ ಬೆಲೆ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48770 ರೂ., 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44710 ರೂ. ಇದೆ. ದೇಶದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47110 ರೂ., 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 46110 ರೂ ಇದೆ. ಅದೇ ರೀತಿ ಬೆಳ್ಳಿ ಬೆಲೆ ಕೆಜಿಗೆ 46710 ರೂಪಾಯಿ ಇದೆ ಎಂದು ಹೇಳಲಾಗಿದೆ.