ಮದುವೆ ಋತುವಿನಲ್ಲಿ ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. 10 ಗ್ರಾಂ ಚಿನ್ನದ ಬೆಲೆ 231 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಬುಧವಾರ 256 ರೂಪಾಯಿ ಇಳಿಕೆ ಕಂಡಿದೆ.
ಬುಧವಾರ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 231 ರೂಪಾಯಿ ಇಳಿಕೆಯೊಂದಿಗೆ 48,421 ರೂಪಾಯಿಯಾಗಿದೆ. ಮಂಗಳವಾರ 10 ಗ್ರಾಂ ಚಿನ್ನದ ಬೆಲೆ 48,652 ರೂಪಾಯಿಯಾಗಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 1,850.50 ಡಾಲರ್ ಪ್ರತಿ ಔನ್ಸ್ ಆಗಿದೆ. ಬೆಳ್ಳಿ ಬೆಲೆ 256 ರೂಪಾಯಿ ಇಳಿಕೆ ಕಂಡಿದ್ದು, ಕೆ.ಜಿ ಬೆಳ್ಳಿ ಬೆಲೆ 65,614 ರೂಪಾಯಿಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ 25.41 ಡಾಲರ್ ಪ್ರತಿ ಔನ್ಸ್ ಆಗಿದೆ.
ತಜ್ಞರ ಪ್ರಕಾರ, 2021ರಲ್ಲಿ 10 ಗ್ರಾಂ ಚಿನ್ನದ ಬೆಲೆ 63 ಸಾವಿರ ರೂಪಾಯಿಯಾಗುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಬಂಗಾರದ ಮೇಲೆ ಹೂಡಿಕೆ ಮಾಡುವುದು ಉತ್ತಮವೆಂದು ತಜ್ಞರು ಹೇಳಿದ್ದಾರೆ.