alex Certify ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ : ಕೇಂದ್ರದ ಬೆಂಬಲ ಬೆಲೆ ಜೊತೆ ಸಿಗಲಿದೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ : ಕೇಂದ್ರದ ಬೆಂಬಲ ಬೆಲೆ ಜೊತೆ ಸಿಗಲಿದೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ

ಬಳ್ಳಾರಿ  :   2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬAಧಿಸಿದAತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು.

ಈ  ಸಂಬಂಧ ಮಾನ್ಯ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಭದಿಸಿದ ಇಲಾಖೆಗೆ ತಕ್ಷಣದಿಂದ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನದ ಸುದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...