ಪಶ್ಚಿಮ ಬಂಗಾಳದ ಸರ್ಕಾರಿ ನೌಕರರಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. ಮುಂದಿನ ತಿಂಗಳಿನಿಂದ ಪಶ್ಚಿಮ ಬಂಗಾಳದ ಎಲ್ಲಾ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ 3 ಪ್ರತಿಶತದಷ್ಟು ಏರಿಕೆ ಕಾಣಲಿದೆ.
ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರೋವಾಗಲೇ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಈ ಘೋಷಣೆ ಮಾಡಿದೆ.
ಏಪ್ರಿಲ್ ಇಲ್ಲವೇ ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮೂರನೇ ಬಾರಿಗೆ ಸಿಎಂ ಖುರ್ಚಿ ಗಟ್ಟಿ ಮಾಡಿಕೊಳ್ಳಲು ಹರಸಾಹಸ ಪಡ್ತಿರೋ ಮಮತಾ ರಾಜ್ಯ ಸರ್ಕಾರಿ ನೌಕರರನ್ನ ಸೆಳೆಯೋಕೆ ಈ ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ.