ನವದೆಹಲಿ: ಸದ್ದಿಲ್ಲದೆ ಎಲ್ಪಿಜಿ ಸಬ್ಸಿಡಿ ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಸೀಮೆಎಣ್ಣೆ ಸಬ್ಸಿಡಿಯನ್ನು ಕೂಡ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಮಾರುಕಟ್ಟೆ ದರದಲ್ಲೇ ಸೀಮೆಎಣ್ಣೆ ಖರೀದಸಬೇಕಿದೆ. ಅಧಿಕೃತ ಘೋಷಣೆ ಮಾಡದೆ ಎಲ್ಪಿಜಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ. ಗ್ರಾಹಕರ ಖಾತೆಗೆ ಬರುತ್ತಿದ್ದ ಗ್ಯಾಸ್ ಸಬ್ಸಿಡಿ ನಿಂತಿದೆ. ವೇಳೆ ಸೀಮೆಎಣ್ಣೆ ಸಬ್ಸಿಡಿಯನ್ನು ಕೂಡ ಕೈಬಿಡಲಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಸೀಮೆಎಣ್ಣೆಯನ್ನು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಸಬ್ಸಿಡಿ ಮತ್ತು ಮಾರುಕಟ್ಟೆ ದರ ಸಮನಾಗಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಯಾವುದೇ ಅನುದಾನ ನೀಡಿಲ್ಲ, ಸೀಮೆಎಣ್ಣೆ ಸಬ್ಸಿಡಿ ಸಂಪೂರ್ಣ ನಿಂತಿದೆ ಎಂದು ಹೇಳಲಾಗಿದೆ.