ನವದೆಹಲಿ: ಸಾಮಾನ್ಯ ವಾಹನಕ್ಕೂ ಬಿಎಚ್ ಸೀರೀಸ್ ನಲ್ಲಿ ವಾಹನ ನೋಂದಣಿ ಮಾಡಿಕೊಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ಈ ಕುರಿತು ಪ್ರಸ್ತಾವ ಸಲ್ಲಿಸಿದ್ದು, ಭಾರತ್ ಸೀರೀಸ್(BH) ಅಡಿಯಲ್ಲಿ ನೋಂದಣಿ ಮಾಡಿಕೊಡಲು ಅವಕಾಶ ಕಲ್ಪಿಸಲು ಮುಂದಾಗಿದೆ. ಪ್ರಸ್ತುತ ಹೊಸ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಬಿಹೆಚ್ ನೋಂದಣಿ ನಿಯಮದಲ್ಲಿ ತಿದ್ದುಪಡಿ ತರಲು ಕರಡು ಅಧಿಸೂಚನೆ ಹೊರಡಿಸಲಾಗಿದೆ.
ಈ ಮೊದಲು ದೇಶದಲ್ಲಿ ವರ್ಗಾವಣೆ ಪಡೆದುಕೊಳ್ಳುತ್ತಿದ್ದ ಕೇಂದ್ರ ಸರ್ಕಾರದ ನೌಕರರಿಗೆ ಮಾತ್ರ ಬಿಹೆಚ್ ಸೀರೀಸ್ ಅಡಿಯಲ್ಲಿ ನೋಂದಣಿಗೆ ಅವಕಾಶ ನೀಡಲಾಗುತ್ತಿತ್ತು. ಈಗ ಸಾಮಾನ್ಯ ವಾಹನಗಳಿಗೂ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.