ನವದೆಹಲಿ: ರೈತರಿಗೆ ಸಬ್ಸಿಡಿ ದರದಲ್ಲಿ ರಸಗೊಬ್ಬರ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಈ ಸಲದ ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರೂ. ಸಬ್ಸಿಡಿ ಘೋಷಣೆ ಮಾಡುವ ಸಾಧ್ಯತೆ ಇದೆ. ರೈತ ಸಮುದಾಯಕ್ಕೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 1.4 ಲಕ್ಷ ಕೋಟಿ ರೂಪಾಯಿಯನ್ನು ಮೀಸಲಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಸಕ್ತ ಬಜೆಟ್ ನಲ್ಲಿ 1.30 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಫೆಬ್ರವರಿ 1 ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ 1.40 ಲಕ್ಷ ಕೋಟಿ ಮೀಸಲಿಡಲು ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ. ರೈತರಿಗೆ ಕೈಗೆಟಕುವ ದರದಲ್ಲಿ ರಸಗೊಬ್ಬರ ಪೂರೈಸಲು ಇದರಿಂದ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.