ನವದೆಹಲಿ: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಎಲ್ಲಾ ಗ್ರಾಹಕರಿಗೆ 200 ರೂ. ಕಡಿತ ಮಾಡಿದ್ದು, ಉಜ್ವಲ ಯೋಜನೆಯಡಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಉಚಿತವಾಗಿ ನೀಡಲಿದೆ.
ಎಲ್ಲಾ ಗ್ರಾಹಕರಿಗೆ ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.
ಉಜ್ವಲ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್‌ಗೆ 400 ರೂಪಾಯಿಗಳ ಪ್ರಯೋಜನವಿದೆ. ಉಜ್ವಲ ಯೋಜನೆಯಡಿ 75 ಲಕ್ಷ ಹೊಸ ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ಸರ್ಕಾರ ನೀಡಲಿದೆ ಎಂದು ಹೇಳಿದ್ದಾರೆ.
ಎಲ್ಲಾ ಗ್ರಾಹಕರಿಗೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡುವ ಸರ್ಕಾರದ ಕ್ರಮವನ್ನು ಸಮಾಜದ ಎಲ್ಲಾ ವರ್ಗಗಳ ಜನರು ಸ್ವಾಗತಿಸಿದ್ದಾರೆ.