ನವದೆಹಲಿ: ಗಂಗಾಜಲದ ಮೇಲೆ ಜಿಎಸ್‌ಟಿ ಹೇರಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಸರ್ಕಾರ ತಿರಸ್ಕರಿಸಿದೆ.
ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ, ಸಿಬಿಐಸಿ, ಗಂಗಾಜಲ ಸೇರಿದಂತೆ ಪೂಜಾ ಸಾಮಗ್ರಿಯನ್ನು ಜಿಎಸ್‌ಟಿ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಹೇಳಿದೆ. 2017 ರಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆಗಳಲ್ಲಿ ಪೂಜೆ ಸಾಮಗ್ರಿ ಮೇಲಿನ ಜಿಎಸ್‌ಟಿಯನ್ನು ವಿವರವಾಗಿ ಚರ್ಚಿಸಲಾಗಿದೆ ಮತ್ತು ಅವುಗಳನ್ನು ವಿನಾಯಿತಿ ಪಟ್ಟಿಯಲ್ಲಿ ಇರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಜಿಎಸ್‌ಟಿ ಜಾರಿಯಾದ ನಂತರ ಎಲ್ಲಾ ಪೂಜಾ ಸಾಮಗ್ರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಸಿಬಿಐಸಿ ಹೇಳಿದೆ.