ರೈತರಿಗೆ ಖಾತರಿ ಬೆಂಬಲ ಬೆಲೆ ಸಿಗಲು ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲಿದೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ರೈತರು ಖಾತರಿಯಾಗಿ ಪಡೆಯಲು ಅನುಕೂಲವಾಗುವಂತೆ ಹೊಸ ನೀತಿಯನ್ನು ಜಾರಿಗೆ ತರಲಾಗುವುದು.
ಇನ್ನು ಸರ್ಕಾರದ ಖರೀದಿಯ ಅಗತ್ಯ ಮತ್ತು ಅವಲಂಬನೆ ಕಡಿಮೆ ಮಾಡುವ ಉದ್ದೇಶ ಕೂಡ ಇದರ ಹಿಂದೆ ಇದೆ ಎನ್ನಲಾಗಿದೆ. ಆಹಾರ ಧಾನ್ಯಗಳಿಗೆ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಬೆಲೆ ತೀರ ಕಡಿಮೆಯಾದಲ್ಲಿ ರೈತರಿಗೆ ತೊಂದರೆ ಆಗದಂತೆ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತರಿಯಾಗಿ ಇರುವಂತೆ ನೋಡಿಕೊಳ್ಳಲು ಸರ್ಕಾರ ಹೊಸ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ.
ಆಮದು-ರಫ್ತು ನೀತಿಯಲ್ಲಿ ಸುಧಾರಣೆ ತರಲಾಗುವುದು. ದಾಸ್ತಾನು ಮಿತಿಯಲ್ಲಿ ಬದಲಾವಣೆ ಮಾಡಲಾಗುವುದು. ಆಹಾರಧಾನ್ಯಗಳ ದಾಸ್ತಾನು ಮಟ್ಟ ಕಾಯ್ದುಕೊಳ್ಳುವ ಪರಿಶೀಲನೆ ನಡೆಸಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಎಂ.ಎಸ್.ಪಿ.ಗಿಂತ ಕೆಳಗೆ ದರ ಕುಸಿಯದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.