ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು – ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ 6397.47 ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಯೋಜನೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.