ನವದೆಹಲಿ: 2019 -20 ನೇ ಹಣಕಾಸು ವರ್ಷದ ವಿಳಂಬದ ಐಟಿಆರ್ ಸಲ್ಲಿಕೆ ಸೇರಿದಂತೆ ವಿವಿಧ ಆದಾಯ ತೆರಿಗೆ ವಿವರಗಳ ಮಾಹಿತಿಯನ್ನು ಸಲ್ಲಿಸುವ ಗಡುವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಈ ಕ್ರಮಕೈಗೊಂಡಿದೆ. ತೆರಿಗೆ ಸಲಹೆಗಾರರು ಮತ್ತು ತೆರಿಗೆದಾರರ ಮನವಿಯನ್ನು ಪರಿಗಣಿಸಿ ಈ ಕ್ರಮ ಕೈಗೊಂಡಿದ್ದು, ಮಾರ್ಚ್ 31ರ ಒಳಗೆ ಪರಿಷ್ಕೃತ ಐಟಿಆರ್ ಸಲ್ಲಿಸಬೇಕಿದ್ದ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಹಣಕಾಸು ವರ್ಷದ ವಿಳಂಬಿತ ಪರಿಷ್ಕೃತ ಐಟಿಆರ್ ಸಲ್ಲಿಕೆ ಸೇರಿ ವಿವಿಧ ಆದಾಯ ತೆರಿಗೆ ಮಾಹಿತಿಗಳನ್ನು ಮೇ 31 ರೊಳಗೆ ಸಲ್ಲಿಕೆ ಮಾಡಬೇಕಿದೆ ಎಂದು ಹೇಳಲಾಗಿದೆ.