
ನವದೆಹಲಿ: ನಾಲ್ಕು ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, 2021 ರ ಜನವರಿ 1 ರಿಂದ ಎಲ್ಲ ಬಗೆಯ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.
ಎಲ್ಲಾ ರೀತಿಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿದ್ದು, ಫಾಸ್ಟ್ ಟ್ಯಾಗ್ ಅಳವಡಿಕೆಯ ನಂತರವೇ ಅವುಗಳ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣ ಮಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.