ನವದೆಹಲಿ: ಈ ವರ್ಷ ದೇಶದಲ್ಲಿ 11.53 ಲಕ್ಷ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರೋತ್ಸಾಹಿಸಲು ಸರ್ಕಾರ 5,228 ಕೋಟಿ ರೂಪಾಯಿ ಸಬ್ಸಿಡಿ ನೀಡಿದೆ.
7432 ಸಾರ್ವಜನಿಕ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಪಿಎಸ್‌ಯು ಆಯಿಲ್ ಮಾರ್ಕೆಟಿಂಗ್ ಕಂಪನಿಗಳಿಗೆ ಸರ್ಕಾರ 800 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 148 ಎಲೆಕ್ಟ್ರಾನಿಕ್ ವೆಹಿಕಲ್ಸ್ ಪಬ್ಲಿಕ್ ಚಾರ್ಜಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಭಾರೀ ಕೈಗಾರಿಕೆಗಳ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸ್ವಚ್ಛ ಮತ್ತು ಹಸಿರು ಸಾರ್ವಜನಿಕ ಸಾರಿಗೆಯನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ವಾಹನ ಹೊರಸೂಸುವಿಕೆಯ ಸಮಸ್ಯೆಯನ್ನು ಪರಿಹರಿಸಲು ವೇಗದ ಅಡಾಪ್ಷನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಎಲೆಕ್ಟ್ರಿಕ್ ವೆಹಿಕಲ್ಸ್(FAME-II) ಯೋಜನೆಯ II ನೇ ಹಂತವನ್ನು ಜಾರಿಗೊಳಿಸುತ್ತಿದೆ ಎಂದು ಸಚಿವಾಲಯ ಹೇಳಿದೆ.