alex Certify ಕೇಂದ್ರ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ, 10 ಸಾವಿರ ರೂ. ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ, 10 ಸಾವಿರ ರೂ. ಸಾಲ ಸೌಲಭ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ವಸತಿ, ನಗರ ವ್ಯವಹಾರಗಳ ಸಚಿವಾಲಯ ವತಿಯಿಂದ ವಿಶೇಷ ಮೈಕ್ರೋ ಕ್ರೆಡಿಟ್ ಸೌಲಭ್ಯ ಯೋಜನೆಯನ್ನು ಆರಂಭಿಸಲಾಗಿದೆ ಎಂದು ಪಿಎಂ ಸ್ವನಿಧಿ ಯೋಜನೆ ಎಂದು ನಾಮಕರಣ ಮಾಡಲಾಗಿದೆ.

ಬೀದಿ ವ್ಯಾಪಾರಿಗಳಿಗೆ ಕೆಲಸ ಪುನರಾರಂಭಿಸಲು ಮತ್ತು ಜೀವನೋಪಾಯಕ್ಕೆ ಅನುಕೂಲವಾಗುವಂತೆ ಸಾಲ ಸೌಲಭ್ಯ ನೀಡಲಾಗುವುದು. ಬೀದಿಬದಿ ವ್ಯಾಪಾರಿಗಳು, ತಳ್ಳುಗಾಡಿ ವ್ಯಾಪಾರಿಗಳು ಸೇರಿದಂತೆ 50 ಲಕ್ಷಕ್ಕೂ ಅಧಿಕ ಮಂದಿಗೆ ಯೋಜನೆಯ ಪ್ರಯೋಜನ ಸಿಗಲಿದೆ.

ಹಣ್ಣು-ತರಕಾರಿ, ಪಕೋಡ, ಮೊಟ್ಟೆ, ಜವಳಿ ಉಡುಪು, ಸಲೂಮ್ ಶಾಪ್, ಲಾಂಡ್ರಿ ಮೊದಲಾದ ಸೇವೆಗಳಲ್ಲಿ ತೊಡಗಿದವರಿಗೆ ಸೌಲಭ್ಯ ಸಿಗಲಿದೆ. ಯೋಜನೆ ನಿರ್ವಹಣೆಗೆ ವೆಬ್ ಪೋರ್ಟಲ್ ಮತ್ತು ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...