ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಈ ವರ್ಷದ ಅಂತ್ಯಕ್ಕೆ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಆಹಾರ ಮತ್ತು ಟ್ರಾವೆಲ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶೇಷ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ. ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ಅನುಕೂಲವಾಗುವಂತೆ, ವಿವಿಧ ವಲಯಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು.
ಇತ್ತೀಚೆಗಷ್ಟೇ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಮತ್ತು ಎಲ್. ಟಿ. ಸಿ. ನಗದು ವೋಚರ್ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದರೊಂದಿಗೆ ಆರ್ಥಿಕತೆಗೆ ಉತ್ತೇಜನ ನೀಡಲು ವರ್ಷಾಂತ್ಯಕ್ಕೆ ಮತ್ತೊಂದು ಆರ್ಥಿಕ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.