
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಭಾರೀ ಏರಿಕೆಯಾದ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಸಂಸದೀಯ ಸಮಿತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕುರಿತ ಸಂಸದೀಯ ಸಮಿತಿಯು ಇಂಧನ ಮೇಲಿನ ತೆರಿಗೆ ಕಡಿತ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ.
ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕುರಿತ ಸಂಸದೀಯ ಸಮಿತಿ ತೆರಿಗೆ ಕಡಿತಗೊಳಿಸುವಂತೆ ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿದೆ ಎಂದು ಹೇಳಲಾಗಿದೆ.