alex Certify ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಭಾರೀ ಏರಿಕೆಯಾದ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಸಂಸದೀಯ ಸಮಿತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕುರಿತ ಸಂಸದೀಯ ಸಮಿತಿಯು ಇಂಧನ ಮೇಲಿನ ತೆರಿಗೆ ಕಡಿತ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ.

ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕುರಿತ ಸಂಸದೀಯ ಸಮಿತಿ ತೆರಿಗೆ ಕಡಿತಗೊಳಿಸುವಂತೆ ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...