alex Certify BIG NEWS: ಕಂಫ್ಯೂಟರ್, ಲ್ಯಾಪ್ ಟಾಪ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು ನಿರ್ಬಂಧ ಸಡಿಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂಫ್ಯೂಟರ್, ಲ್ಯಾಪ್ ಟಾಪ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು ನಿರ್ಬಂಧ ಸಡಿಲಿಕೆ

ನವದೆಹಲಿ: ಕಂಪ್ಯೂಟರ್, ಲ್ಯಾಪ್ಟಾಪ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಆಮದು ಮೇಲೆ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ.

ಎಲೆಕ್ಟ್ರಾನಿಕ್ ವಸ್ತುಳ ಆಮದಿಗೆ ಲೈಸೆನ್ಸ್ ಕಡ್ಡಾಯ ಎನ್ನುವ ನಿಯಮ ಕೈಬಿಡಲಾಗಿದ್ದು, ಆನ್ಲೈನ್ ದೃಢೀಕರಣ ಕಡ್ಡಾಯಗೊಳಿಸಲಾಗಿದೆ. ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ನಿಗಾವಹಿಸುವ ಉದ್ದೇಶದಿಂದ ಈ ನಿಯಮ ಜಾರಿಗೆ ತಂದಿರುವುದಾಗಿ ಸರ್ಕಾರ ಹೇಳಿದೆ.

ವಿದೇಶಿ ವ್ಯಾಪಾರ ನಿರ್ದೇಶಕ ಸಂತೋಷ್ ಕುಮಾರ್ ಸಾರಂಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಕ್ಷಣದಿಂದಲೇ ನಿಯಮ ಜಾರಿಗೆ ಬರಲಿದೆ. ಆಮದು ಆಗುತ್ತಿರುವ ಉತ್ಪನ್ನಗಳು ನಂಬಲರ್ಹ ಸಂಸ್ಥೆಗಳಿಂದ ಬರುತ್ತಿವೆ ಎನ್ನುವುದನ್ನು ಖಚಿತಪಡಿಸುವ ಉದ್ದೇಶದಿಂದ ಈ ಆನ್ಲೈನ್ ದೃಢೀಕರಣ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಮದು ಕೊಳ್ಳಲಾದ ಉತ್ಪನ್ನಗಳ ಸಾರಾಂಶ, ಈ ಮೊದಲು ಆಮದು, ರಫ್ದಿನ ಮಾಹಿತಿ, ಇವುಗಳ ಮೌಲ್ಯದ ಮಾಹಿತಿಯನ್ನು ಆನ್ಲೈನ್ ನಲ್ಲಿ ದೃಢೀಕರಣ ಮಾಡುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...