ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ತಂದರೆ ಬೆಲೆ ದೇಶಾದ್ಯಂತ ಒಂದೇ ರೀತಿಯಲ್ಲಿ ಇರಲಿದೆ. ಇಂಧನ ಬೆಲೆ ಕಡಿಮೆಯಾಗಲಿದೆ ಎಂದು ಹೇಳಲಾಗಿತ್ತು.
ಆದರೆ, ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ಕಚ್ಚಾತೈಲ, ಪೆಟ್ರೋಲ್, ಡೀಸೆಲ್, ಜೆಟ್ ಇಂಧನ ಮತ್ತು ನೈಸರ್ಗಿಕ ಅನಿಲವನ್ನು ತರುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಅವರು, ಪೆಟ್ರೋಲಿಯಂ, ಕಚ್ಚಾ ತೈಲ, ಡೀಸೆಲ್, ನೈಸರ್ಗಿಕ ಅನಿಲ ಮತ್ತು ಎಟಿಎಫ್ ಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗುವುದ. ಇಲ್ಲಿಯವರೆಗೆ ಜಿಎಸ್ಟಿ ಕೌನ್ಸಿಲ್ ನಲ್ಲಿ ಪ್ರತಿನಿಧಿಸುವ ರಾಜ್ಯಗಳು ಕೂಡ ಇದರ ಬಗ್ಗೆ ಪ್ರಸ್ತಾಪಿಸಿಲ್ಲ. ಕೌನ್ಸಿಲ್ ಸಭೆಯಲ್ಲಿ ಚರ್ಚೆಯಾಗಿ ಜಿಎಸ್ಟಿಗೆ ಸೇರಿಸಲು ಶಿಫಾರಸು ಮಾಡಿಲ್ಲ. ಕೌನ್ಸಿಲ್ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಗೆ ಸೇರಿಸಲು ಶಿಫಾರಸು ಮಾಡಲಿದೆ ಎಂದಿದ್ದಾರೆ.