ನವದೆಹಲಿ: ಮುಂದಿನ 5 ವರ್ಷಗಳಲ್ಲಿ 3 ಲಕ್ಷ ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ಎರಡು ದಿನಗಳ ರಾಜ್ಯ ಸಹಕಾರ ಸಚಿವರ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಸಮಗ್ರ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರಿ ನೀತಿ ರೂಪಿಸಲು ಸಮಿತಿ ರಚಿಸಲಾಗಿದೆ. ಪ್ರತಿ ರಾಜ್ಯವು ಅದರಲ್ಲಿ ಪ್ರಾತಿನಿಧ್ಯ ಹೊಂದಿರುತ್ತದೆ. ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಉಚಿತ ನೋಂದಣಿ, ಗಣಕೀಕರಣ ಮತ್ತು ಪ್ರಜಾಸತ್ತಾತ್ಮಕ ಚುನಾವಣೆಗಳು ನೀತಿಯ ಕೇಂದ್ರಬಿಂದುವಾಗಿದೆ. ಸಕ್ರಿಯ ಸದಸ್ಯತ್ವ, ನಾಯಕತ್ವದಲ್ಲಿ ವೃತ್ತಿಪರತೆ ಮತ್ತು ಪಾರದರ್ಶಕತೆ, ಜವಾಬ್ದಾರಿಯುತ ಮತ್ತು ಉತ್ತರದಾಯಿತ್ವ ಮತ್ತು ಎಲ್ಲಾ ಚರ್ಚೆಗಳನ್ನು ಮಧ್ಯಸ್ಥಗಾರರೊಂದಿಗೆ ನಡೆಸಲಾಗುತ್ತದೆ ಎಂದು ಹೇಳಿದರು.
ಪ್ರಸ್ತುತ ದೇಶದಲ್ಲಿ 65 ಸಾವಿರ ಸಕ್ರಿಯ ಪ್ರಾಥಮಿಕ ಕೃಷಿ ಸಾಲ ಸಂಘಗಳಿವೆ. ಮುಂದಿನ 5 ವರ್ಷಗಳಲ್ಲಿ 3 ಲಕ್ಷ ಪಿಎಸಿಎಸ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ನಿಷ್ಕ್ರಿಯ PACS ಗಳ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.