ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 5 ಕೋಟಿ ಉದ್ಯೋಗವನ್ನ ಸೃಷ್ಟಿ ಮಾಡಲು ಕೇಂದ್ರ ಸರ್ಕಾರ ಅವಿರತ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಮತ್ತು ಎಂಸ್ಎಂಇ ಸಚಿನ ನಿತಿನ್ ಗಡ್ಕರಿ ಹೇಳಿದ್ದಾರೆ.
ಪ್ರಸ್ತುತ ದೇಶದಲ್ಲಿ ಗ್ರಾಮೀಣ ಕೈಗಾರಿಕೆಗಳ ವಹಿವಾಟು 80 ಸಾವಿರ ಕೋಟಿ ರೂಪಾಯಿ ಇದೆ. ಮುಂದಿನ 5 ವರ್ಷಗಳಲ್ಲಿ ಇದನ್ನ 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ರು.
ಅಗ್ರೋವಿಷನ್ ಫೌಂಡೇಶನ್ ಆಯೋಜಿಸಿದ್ದ ಕೃಷಿ – ಆಹಾರ ಸಂಸ್ಕರಣಾ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವ್ರು, ಕೇಂದ್ರ ಸರ್ಕಾರ ಯೋಜನೆಗಳು ಮುಂದಿನ ದಿನಗಳಲ್ಲಿ ಕೃಷಿ ಹಾಗೂ ಆಹಾರ ಸಂಸ್ಕರಣೆ ವಿಭಾಗದಲ್ಲಿ ಉದ್ಯೋಗಾವಕಾಶಗಳನ್ನ ಸೃಷ್ಟಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಪ್ರಸ್ತುತ 280 ಲಕ್ಷ ಟನ್ ಅಕ್ಕಿ ಉತ್ಪಾದನೆಯಾಗುತ್ತಿದೆ. ಇದರರ್ಥ ವಿಶ್ವದ ಮಾರುಕಟ್ಟೆಗೆ ಪೂರೈಕೆ ಮಾಡುವಷ್ಟರ ಮಟ್ಟಿಗೆ ನಾವು ಅಕ್ಕಿ ಉತ್ಪಾದನೆ ಮಾಡುತ್ತಿದ್ದೇವೆ. ಎಥನಾಲ್ನಿಂದ ಕೃಷಿ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತದೆ. ಇದರಲ್ಲಿ 1 ಲಕ್ಷ ಕೋಟಿ ರೂಪಾಯಿ ದೇಶದ ರೈತರ ಜೇಬನ್ನ ಸೇರುತ್ತೆ ಎಂದು ಹೇಳಿದರು.