alex Certify ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್​

ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 5 ಕೋಟಿ ಉದ್ಯೋಗವನ್ನ ಸೃಷ್ಟಿ ಮಾಡಲು ಕೇಂದ್ರ ಸರ್ಕಾರ ಅವಿರತ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಮತ್ತು ಎಂಸ್​ಎಂಇ ಸಚಿನ ನಿತಿನ್​ ಗಡ್ಕರಿ ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ಗ್ರಾಮೀಣ ಕೈಗಾರಿಕೆಗಳ ವಹಿವಾಟು 80 ಸಾವಿರ ಕೋಟಿ ರೂಪಾಯಿ ಇದೆ. ಮುಂದಿನ 5 ವರ್ಷಗಳಲ್ಲಿ ಇದನ್ನ 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ರು.

ಅಗ್ರೋವಿಷನ್​ ಫೌಂಡೇಶನ್​ ಆಯೋಜಿಸಿದ್ದ ಕೃಷಿ – ಆಹಾರ ಸಂಸ್ಕರಣಾ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವ್ರು, ಕೇಂದ್ರ ಸರ್ಕಾರ ಯೋಜನೆಗಳು ಮುಂದಿನ ದಿನಗಳಲ್ಲಿ ಕೃಷಿ ಹಾಗೂ ಆಹಾರ ಸಂಸ್ಕರಣೆ ವಿಭಾಗದಲ್ಲಿ ಉದ್ಯೋಗಾವಕಾಶಗಳನ್ನ ಸೃಷ್ಟಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ 280 ಲಕ್ಷ ಟನ್​ ಅಕ್ಕಿ ಉತ್ಪಾದನೆಯಾಗುತ್ತಿದೆ. ಇದರರ್ಥ ವಿಶ್ವದ ಮಾರುಕಟ್ಟೆಗೆ ಪೂರೈಕೆ ಮಾಡುವಷ್ಟರ ಮಟ್ಟಿಗೆ ನಾವು ಅಕ್ಕಿ ಉತ್ಪಾದನೆ ಮಾಡುತ್ತಿದ್ದೇವೆ. ಎಥನಾಲ್​ನಿಂದ ಕೃಷಿ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತದೆ. ಇದರಲ್ಲಿ 1 ಲಕ್ಷ ಕೋಟಿ ರೂಪಾಯಿ ದೇಶದ ರೈತರ ಜೇಬನ್ನ ಸೇರುತ್ತೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...