ಬೆಂಗಳೂರು: ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ರೀತಿ ಒಂದೇ ಸೂರಿನಡಿ 100 ಸೇವೆ ಒದಗಿಸುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ.
ಗಣರಾಜ್ಯೋತ್ಸವದ ಜನವರಿ 26 ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಆರಂಭಿಸಲಾಗುತ್ತದೆ. 3000 ಗ್ರಾಮ ಒನ್ ಸೇವಾ ಕೇಂದ್ರ ತೆರೆಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರಂಭಿಕ ಹಂತದಲ್ಲಿ 12 ಜಿಲ್ಲೆಗಳಲ್ಲಿ ಸೇವೆ ಒದಗಿಸಲಾಗುತ್ತದೆ.
ಬಳ್ಳಾರಿ, ಬೆಳಗಾವಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ.
ಈ ಕೇಂದ್ರಗಳಲ್ಲಿ ಕಂದಾಯ, ಆಹಾರ, ಆರೋಗ್ಯ, ಕಾರ್ಮಿಕ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ 100 ಸೇವೆಗಳನ್ನು ಒದಗಿಸಲಾಗುತ್ತಿದೆ. ಒಂದೇ ಕೇಂದ್ರದಲ್ಲಿ 100 ಸೇವೆಗಳು ಸಿಗಲಿದ್ದು, ಜನರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.