alex Certify ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಜು. 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಎಂದಿನಂತೆ ಕರೆಂಟ್ ಬಿಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಜು. 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಎಂದಿನಂತೆ ಕರೆಂಟ್ ಬಿಲ್

ಗೃಹಜ್ಯೋತಿ ಯೋಜನೆಯಡಿ ನೋಂದಣಿ ಆಗಿರುವ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ.

ಇಂಧನ ಇಲಾಖೆಯ ಆದೇಶದ ಅನ್ವಯ ಜುಲೈ 27ಕ್ಕೆ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದರೂ ಎಂದಿನಂತೆಯೇ ಬಿಲ್ ಬಂದಿದ್ದು, ಕೆಲವು ಗ್ರಾಹಕರು ಬಿಲ್ ಪಾವತಿಸಬೇಕೆ, ಬೇಡವೇ ಎನ್ನುವ ಗೊಂದಲದಲ್ಲಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಪಡೆದ 2.16 ಕೋಟಿ ಗ್ರಾಹಕರಲ್ಲಿ 2.14 ಕೋಟಿ ಮಂದಿ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುತ್ತಿದ್ದು, ಇದುವರೆಗೆ 1.41 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿವೆ. ಇವರೆಲ್ಲರಿಗೂ ಆಗಸ್ಟ್ ನಿಂದ ಶೂನ್ಯ ಬಿಲ್ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಜುಲೈ 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಶೂನ್ಯ ಬಿಲ್ ಪಡೆಯುವ ಭಾಗ್ಯ ಸಿಕ್ಕಿಲ್ಲ. ಜು. 27 ರ ನಂತರ ನೋಂದಾಯಿಸಿದವರಿಗೆ ಆಗಸ್ಟ್ ನಲ್ಲಿ ಶೂನ್ಯ ಬಿಲ್ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...