ಬೆಂಗಳೂರು : ಯಜಮಾನಿಯರಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್ ಸಿಕ್ಕಿದ್ದು, ಹಬ್ಬದೊಳಗೆ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ತಿಂಗಳು ಅಂದರೆ ನವೆಂಬರ್ ನಲ್ಲಿ ಈಗಾಗಲೇ 1.16 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ, ಸುಮಾರು 8 ಲಕ್ಷ ಫಲಾನುಭವಿಗಳಿಗೆ ತಾಂತ್ರಿಕ ತೊಂದರೆಯಿಂದಾಗಿ ಹಣ ಜಮೆಯಾಗುತ್ತಿಲ್ಲ. ದೀಪಾವಳಿ ಹಬ್ಬದೊಳಗೆ ಗೃಹಲಕ್ಷ್ಮಿಯೋಜನೆಯಡಿ ನೋಂದಣಿಯಾಗಿರುವ ಎಲ್ಲ ಮಹಿಳೆಯರಿಗೆ ಹಣ ಹಾಕುವ ಪ್ರಯತ್ನ ನಡೆದಿದೆ ಎಂದರು.
ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಬ್ಬದೊಳಗೆ ಹಣ ಜಮಾ ಮಾಡುವಂತೆ ಸೂಚನೆ ನೀಡಿರುವ ಹಿನ್ನೆಲೆ ತಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಹಬ್ಬದೊಳಗೆ ಹಣ ಜಮಾ ಮಾಡಲು ಎಲ್ಲಾ ಪ್ರಯತ್ನ ನಡೆದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ದೀಪಾವಳಿ ಹಬ್ಬದ ಹೊತ್ತಿಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಸುವುದಾಗಿ ಹೇಳಿದ್ದಾರೆ.