ನವದೆಹಲಿ: ದೇಶಾದ್ಯಂತ ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಜಿಎಸ್‌ಟಿ ಕೌನ್ಸಿಲ್ ತನ್ನ 49 ನೇ ಸಭೆಯಲ್ಲಿ ಜಿಎಸ್‌ಟಿ ಮೇಲ್ಮನವಿ ನ್ಯಾಯಾಧಿಕರಣವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಹೇಳಿದರು.
ರಾಜ್ಯಗಳ ಕೋರಿಕೆಯ ಮೇರೆಗೆ ಹಂತ ಹಂತವಾಗಿ ರಾಜ್ಯ ಪೀಠಗಳನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದು, ಪ್ರಸಕ್ತ ಹಣಕಾಸು ವರ್ಷದ ಜೂನ್‌ವರೆಗೆ ಕೇಂದ್ರ ಜಿಎಸ್‌ಟಿ ಪ್ರಾಧಿಕಾರಗಳಿಗೆ ಸಂಬಂಧಿಸಿದ 14 ಸಾವಿರಕ್ಕೂ ಹೆಚ್ಚು ಜಿಎಸ್‌ಟಿ ಮೇಲ್ಮನವಿಗಳು ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದ್ದಾರೆ.