ನವದೆಹಲಿ: ಸತತ 7ನೇ ತಿಂಗಳು ಒಂದು ಲಕ್ಷ ಕೋಟಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹವಾಗಿದೆ. ಏಪ್ರಿಲ್ ನಲ್ಲಿ ಸಾರ್ವಕಾಲಿಕ ದಾಖಲೆಯ 1.41 ಲಕ್ಷ ಕೋಟಿ ರೂಪಾಯಿ ಜಿಎಸ್ಟಿ ಸಂಗ್ರಹಿಸಲಾಗಿದೆ.
ಕೊರೋನಾ ಎರಡನೇ ಅಲೆಯ ನಡುವೆಯೂ ಏಪ್ರಿಲ್ ನಲ್ಲಿ ದಾಖಲೆಯ ಜಿಎಸ್ಟಿ ಸಂಗ್ರಹವಾಗಿದೆ. ಇದು ದೇಶದ ಆರ್ಥಿಕತೆ ಬಲಗೊಳ್ಳುತ್ತಿರುವ ಸೂಚನೆ ಎಂದು ತಜ್ಞರು ಹೇಳಿದ್ದಾರೆ. ಕಳೆದ ವರ್ಷ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಜಿಎಸ್ಟಿ 32 ಸಾವಿರ ಕೋಟಿ ರೂ.ಗೆ ಇಳಿದಿತ್ತು. ಕೊರೋನಾ ಮೊದಲನೇ ಅಲೆ ಮುಗಿದ ನಂತರದಲ್ಲಿ ಆರ್ಥಿಕತೆ ಚೇತರಿಕೆ ಕಂಡಿದೆ. ಹೀಗಾಗಿ ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ.