ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ನಾಗಾಲೋಟದಲ್ಲಿ ಮುಂದುವರೆದಿದೆ. ದೇಶದಲ್ಲಿಯೇ ಅತ್ಯಧಿಕ ಬೆಳವಣಿಗೆ ದರ ದಾಖಲಿಸಿದೆ.
ಕಳೆದ 7 ತಿಂಗಳಲ್ಲಿ 20 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ನವೆಂಬರ್ ಅಂತ್ಯದವರೆಗೆ 80,269 ಕೋಟಿ ರೂ. ಜಿಎಸ್ಟಿ ಸಂಗ್ರಹಿಸಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ಶೇಕಡ 34 ರಷ್ಟು ಪ್ರಗತಿ ಸಾಧಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದೇಶದಲ್ಲಿಯೇ ಜಿ.ಎಸ್.ಟಿ ಸಂಗ್ರಹಣೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ರಾಜ್ಯವು, ನವೆಂಬರ್ ಅಂತ್ಯದವರೆಗೆ 80,269 ಕೋಟಿ ರೂ. ಜಿ.ಎಸ್.ಟಿ ಸಂಗ್ರಹಣೆ ಮಾಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ.34ರಷ್ಟು ಏರಿಕೆ ಕಂಡಿದ್ದು, ಬೆಳವಣಿಗೆ ದರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನಗಳಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.