ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ಏಪ್ರಿಲ್‌ನಲ್ಲಿ ಶೇ. 12 ರಷ್ಟು ಏರಿಕೆಯಾಗಿ 1.87 ಲಕ್ಷ ಕೋಟಿ ರೂ.ಗೆ ತಲುಪಿದೆ.
ಇದು ಮಾಸಿಕ ಅತ್ಯಧಿಕ ಸಂಗ್ರಹ ಆಗಿದೆ. ಏಪ್ರಿಲ್ 2023 ರಲ್ಲಿ ಒಟ್ಟು ಜಿಎಸ್‌ಟಿ ಆದಾಯವು 1,87,035 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್‌ಟಿ 38,440 ಕೋಟಿ ರೂ., ಎಸ್‌ಜಿಎಸ್‌ಟಿ 47,412 ಕೋಟಿ ರೂ., ಐಜಿಎಸ್‌ಟಿ 89,158 ಕೋಟಿ(34,972 ರೂ. ಸೇರಿದಂತೆ 34,977 ರೂ.), ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ಕೋಟಿ) ಮತ್ತು ಸೆಸ್ 12,025 ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಹಿಂದಿನ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ.ಗಳ ಹೆಚ್ಚಿನ ಸಂಗ್ರಹವಾಗಿತ್ತು. ಏಪ್ರಿಲ್ 2023 ರ ಆದಾಯವು ಕಳೆದ ವರ್ಷ ಇದೇ ತಿಂಗಳ ಜಿಎಸ್‌ಟಿ ಆದಾಯಕ್ಕಿಂತ ಶೇಕಡ 12 ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿದೆ.