
ನವದೆಹಲಿ: 50ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸಿನಿಮಾ ಹಾಲ್‌ಗಳಲ್ಲಿ ನೀಡಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ ದರ ಶೇ.5ಕ್ಕೆ ಇಳಿಕೆ ಮಾಡಲಾಗಿದೆ.
ಈ ಮೂಲಕ ಚಲನಚಿತ್ರ ಪ್ರೇಮಿಗಳಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ 50 ನೇ ಸಭೆಯಲ್ಲಿ ಚಿತ್ರಮಂದಿರಗಳಲ್ಲಿ ನೀಡಲಾಗುವ ಆಹಾರದ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ಕ್ಕೆ ಇಳಿಸಲು ನಿರ್ಧರಿಸಿದೆ. ಈ ಹಿಂದೆ ಜಿಎಸ್‌ಟಿ ದರ ಶೇ.18 ಇತ್ತು.