ನವದೆಹಲಿ: ದ್ವಿಚಕ್ರವಾಹನ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುಳಿವು ನೀಡಿದ್ದು, ದ್ವಿಚಕ್ರ ವಾಹನಗಳಿಗೆ ಶೇಕಡಾ 28ರಷ್ಟು ತೆರಿಗೆ ಸೂಕ್ತವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.
ದ್ವಿಚಕ್ರ ವಾಹನಗಳು ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನಗಳ ವ್ಯಾಪ್ತಿಗೆ ಬರುವುದಿಲ್ಲ. ಐಷಾರಾಮಿ ಸರಕುಗಳ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೆರಿಗೆ ದರ ಪರಿಷ್ಕರಣೆ ಮಾಡಬೇಕೆಂಬ ಸಲಹೆಯನ್ನು ಪರಿಗಣಿಸಲಾಗಿದೆ. ಜಿಎಸ್ಟಿ ಮಂಡಳಿ ಸಭೆಯಲ್ಲಿ ದ್ವಿಚಕ್ರ ವಾಹನಗಳ ತೆರಿಗೆ ದರ ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ದ್ವಿಚಕ್ರ ವಾಹನಗಳ ಮೇಲೆ ಶೇಕಡ 28 ರಷ್ಟು ಭಾರಿ ತೆರಿಗೆ ವಿಧಿಸಲಾಗುತ್ತಿದೆ. ಇದನ್ನು ಇಳಿಸಬೇಕೆಂಬ ಸಲಹೆಯನ್ನು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.