ನವದೆಹಲಿ: ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಹೊರೆ ಇಳಿಸಲು ಇವುಗಳನ್ನು GST ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ.
ನೀತಿ ಆಯೋಗ ಶತಕದ ಗಡಿದಾಟಿದ ಇಂಧನ ದರ ಕಡಿಮೆ ಮಾಡಲು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ತರಲು ಚಿಂತನೆ ನಡೆಸಿದೆ. ಈಗಾಗಲೇ ಶತಕದ ಗಡಿ ದಾಟಿರುವ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡಲು ಜಿಎಸ್ಟಿ ವ್ಯಾಪ್ತಿಗೆ ತರಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ವಿದ್ಯುತ್ ಕೂಡ ಜಿಎಸ್ಟಿ ವ್ಯಾಪ್ತಿಗೆ ತರಲು ಚಿಂತನೆ ನಡೆದಿದ್ದು, ಇದರಿಂದ ದರ ಇಳಿಕೆಯಾಗಿ ಜನಸಾಮಾನ್ಯರಿಗೆ ಹೊರೆ ಕಡಿಮೆಯಾಗಲಿದೆ ಎಂದು ನೀತಿ ಆಯೋಗ ಅಭಿಪ್ರಾಯಪಟ್ಟಿದ್ದು, ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದೆ.